×
Ad

ಹೊರಗುತ್ತಿಗೆ ನೌಕರರ ಹಕ್ಕಿಗಾಗಿ ಉಪವಾಸ ಸತ್ಯಾಗ್ರಹ

Update: 2022-04-09 19:14 IST

ಉಡುಪಿ : ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಎ.೧೨ರಂದು ಬೆಳಗ್ಗೆ ೮ಗಂಟೆಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಎ.೧೯ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ಸೇವಾ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಜಿ.ಎ.ಕೋಟಿಯಾರ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಪ್ರತಿಯೊಂದು ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಆಧಾರಿತ ನೌಕರರಿಗೆ ಸಮಾನ ವೇತನ ನೀಡಬೇಕು. ಸರಕಾರಿ ಕಚೇರಿ ಗಳಲ್ಲಿ ಹಾಗೂ ಖಾಸಗಿ ಕಂಪೆನಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ನೌಕರರಿಗೆ ಸೇವಾ ಭದ್ರತೆಯನ್ನು ಕೊಡಬೇಕು. ಪ್ರತಿಯೊಬ್ಬ ಗುತ್ತಿಗೆ ನೌಕರರಿಗೆ ವೇತನ ಗ್ರಾಚ್ಯುಟಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮಹಿಳಾ ಅಧ್ಯಕ್ಷೆ ಗೀತಾ ಸಿ.ಪೂಜಾರಿ, ಪಿಆರ್‌ಓ ನರಸಿಂಹಮೂರ್ತಿ ರಾವ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News