×
Ad

ಆರಗ ಜ್ಞಾನೇಂದ್ರ ಆರೆಸ್ಸೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ: ಶಾಸಕಿ ಅಂಜಲಿ ನಿಂಬಾಳ್ಕರ್‌

Update: 2022-04-09 19:41 IST
phtot: twitter (ಅಂಜಲಿ ನಿಂಬಾಳ್ಕರ್‌)

ಬೆಳಗಾವಿ:  ' ಗೃಹ ಸಚಿವರೇ ಮಾಧ್ಯಮಗಳಿಗೆ ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಯುವಕರನ್ನು ಕೋಮುಗಲಭೆಗೆ ಪ್ರಚೋದಿಸುತ್ತಿದ್ದಾರೆ' ಎಂದು ಖಾನಾಪುರ ಮತ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್‌ ಆರೋಪಿಸಿದ್ದಾರೆ. 

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 'ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಕೋಮು ಸೌಹಾರ್ದ ಹಾಳು ಮಾಡುವುದಕ್ಕಾಗಿ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆರೆಸ್ಸೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ' ಎಂದು  ಹೇಳಿದರು.

ಇದೇ ವೇಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಳು ಮಾಹಿತಿ ನೀಡಿ ಯುವಕರನ್ನು ಪ್ರಚೋದಿಸಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಗೃಹ ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News