×
Ad

ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ; ರಮಾನಾಥ ರೈ, ಜೈನ್, ಮಿಥುನ್, ಇನಾಯತ್ ಅಲಿ ಸಹಿತ ಹಲವರ ನೇಮಕ

Update: 2022-04-09 20:55 IST
ರಮಾನಾಥ ರೈ, ಅಭಯಚಂದ್ರ ಜೈನ್, ಮಿಥುನ್ ರೈ

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ಪುನಃ ರಚಿಸಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶನಿವಾರ 109 ಮಂದಿಯ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ. ಆ ಪೈಕಿ ದ.ಕ.ಜಿಲ್ಲೆಯ 13 ಮಂದಿಗೆ ಜವಾಬ್ದಾರಿ ವಹಿಸಿಕೊಡಲಾಗಿದೆ.

ಮಾಜಿ ಸಚಿವ, ದ.ಕ.ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ವಿಧಾನ ಪರಿಷತ್ ಮಾಜಿ ಸದಸ್ಯ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮತ್ತು ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ಅವರನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಖ್ಯಾತ ಉದ್ಯಮಿ, ಎನ್‌ಎಸ್‌ಯುಐ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ, ದ.ಕ.ಜಿಲ್ಲಾ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮಿಥುನ್ ರೈ, ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಎ. ಬಾವಾ, ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ರಕ್ಷಿತ್ ಶಿವರಾಂ, ಕೃಪಾ ಆಳ್ವ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News