×
Ad

ಕೆಪಿಸಿಸಿ ಉಪಾಧ್ಯಕ್ಷರಾಗಿ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ ನೇಮಕ

Update: 2022-04-09 21:02 IST
ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ

ಉಡುಪಿ : ಬಿಜೆಪಿ ಸೇರುವ ಸುದ್ಧಿಯ ಮಧ್ಯೆಯೇ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ಉಪಾಧ್ಯಕ್ಷ ಹುದ್ದೆಯನ್ನು ನೀಡಲಾಗಿದೆ.

ಅದೇ ರೀತಿ ಕೆಪಿಸಿಸಿ ಇನ್ನೋರ್ವ ಉಪಾಧ್ಯಕ್ಷರಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎ.ಗಫೂರ್ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇಮಕ ಗೊಳಿಸಿ ಆದೇಶ ನೀಡಿದ್ದಾರೆ.

‘ಪಕ್ಷದ ವರಿಷ್ಠರು ನನಗೆ ಮೊದಲೇ ಹುದ್ದೆ ಕೊಡುತ್ತೇನೆ ಎಂದು ಹೇಳಿದ್ದಾರೆ. ಅದರಂತೆ ಆ ಹುದ್ದೆಯನ್ನು ಕೊಟ್ಟಿದ್ದಾರೆ. ಮುಂದೆ ಈ ಬಗ್ಗೆ ನೋಡಬೇಕಾಗಿದೆ. ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ನಾನು ಈಗ ಮಾತನಾಡಲ್ಲ’

-ಪ್ರಮೋದ್ ಮಧ್ವರಾಜ್, ಮಾಜಿ ಸಚಿವರು  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News