×
Ad

ಸುಳ್ಯ: ಮಹಿಳೆಯ ಅತ್ಯಾಚಾರ ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ, ದಂಡ

Update: 2022-04-09 22:26 IST

ಸುಳ್ಯ:  ಬಾಳಿಲ ಗ್ರಾಮದ ಕಾಂಚೋಡು ಎಂಬಲ್ಲಿ  ಮಾನಸಿಕ ಅಸ್ವಸ್ಥರಾಗಿದ್ದ ಮಹಿಳೆಯೋರ್ವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಕೋಟೆ ಮುಂಡುಗಾರು ನಿವಾಸಿ ಸುಬ್ರಮಣ್ಯ ಎಂಬಾತ ಅತ್ಯಾಚಾರ ಮಾಡಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಪ್ರಕಟವಾಗಿದ್ದು, ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದಾರೆ.

2015ರ ಜನವರಿ 11ರಂದು ಸಂತ್ರಸ್ತೆಯ ತಾಯಿ ಬೀಡಿ ಕೊಡಲು ಬಾಳಿಲ ಪೇಟೆಗೆ ಹೋದ ಸಂದರ್ಭ ಮನೆಗೆ ಅಕ್ರಮ ಪ್ರವೇಶ ಮಾಡಿದ್ದ ಆರೋಪಿ ಸುಬ್ರಮಣ್ಯ ಮಹಿಳೆಯನ್ನು ಅತ್ಯಾಚಾರ ಮಾಡಿ, ಜೀವ ಬೆದರಿಕೆ ಒಡ್ಡಿದ್ದ ಎಂದು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಂದಿನ ಎ.ಎಸ್.ಐ. ಪುರುಷೋತ್ತಮ ಕೆ. ಪ್ರಕರಣ ದಾಖಲಿಸಿ ಎಸ್.ಐ. ಚಂದ್ರಶೇಖರ್ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ ಎ. ಆರೋಪಿಗೆ ಎರಡು ವರ್ಷ ಜೈಲುಶಿಕ್ಷೆ, 10 ಸಾವಿರ ರೂ ದಂಡ, ದಂಡ ತೆರಲು ವಿಫಲವಾದಲ್ಲಿ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News