×
Ad

ಚಂದ್ರು ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ: ಸಿಎಂ ಬೊಮ್ಮಾಯಿ

Update: 2022-04-10 10:30 IST
ಕೊಲೆಯಾದ ಚಂದ್ರು

ಬೆಂಗಳೂರು, ಎ.10: ಐದು ದಿನಗಳ ಹಿಂದೆ ನಗರದ ಹಳೆಗುಡ್ಡದ ಹಳ್ಳಿ ಪ್ರದೇಶದಲ್ಲಿ ನಡೆದ ದಲಿತ ಯುವಕ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರವಿವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ‘ಇಲ್ಲಿ ಯಾರ ಹೇಳಿಕೆಯೂ ಮುಖ್ಯವಲ್ಲ, ಸತ್ಯ ಹೊರಬರಬೇಕು ಅಷ್ಟೇ. ಯಾರು ವಾಗ್ದಾಳಿ ಮಾಡ್ತಾರೋ, ಯಾರು ಹೇಳಿಕೆ ಕೊಡ್ತಾರೋ ಅದು ಮುಖ್ಯವಾಗುವುದಿಲ್ಲ. ಘಟನೆಯ ಸತ್ಯಾಂಶ ಜನರಿಗೆ ತಿಳಿಯಬೇಕಿದೆ. ಈ ಹಿನ್ನೆಲೆಯನ್ನು ನಿನ್ನೆ ನಾನು ಕಮಿಷನರ್ ಮತ್ತು ಡಿಜಿಯವರ ಬಳಿ ಮಾತನಾಡಿದ್ದೇನೆ. ಅದರಂತೆ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನ ಮಾಡಿದ್ದೇವೆ’ ಎಂದರು.

ಚಂದ್ರು ಹತ್ಯೆ ಬೆನ್ನಲ್ಲೆ ಗೃಹಸಚಿವರು ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News