×
Ad

ಧಾರವಾಡ ಮುಸ್ಲಿಮ್ ವರ್ತಕರ ಅಂಗಡಿ ಧ್ವಂಸ ಪ್ರಕರಣ: ಎಫ್ ಐಆರ್ ದಾಖಲು

Update: 2022-04-10 13:45 IST

ಧಾರವಾಡ: ಇಲ್ಲಿನ ನುಗ್ಗಿಕೇರಿ ಗ್ರಾಮದ ಹನುಮಂತ ದೇವಸ್ಥಾನದ ಹೊರಗಡೆ ಇರುವ ಮುಸ್ಲಿಮರಿಗೆ ಸೇರಿದ ಅಂಗಡಿಗಳನ್ನು ಸಂಘಪರಿವಾರ ಕಾರ್ಯಕರ್ತರು ಬಲವಂತವಾಗಿ ತೆರವುಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಧಾರವಾಡ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. 

ಶನಿವಾರ ಮಧ್ಯಾಹ್ನ ವೇಳೆ ಹನುಮಂತ ದೇವಸ್ಥಾನದ ಆವರಣದಲ್ಲಿದ್ದ ನಾಲ್ಕು ಅಂಗಡಿಗಳನ್ನು ಶ್ರೀ ರಾಮ ಸೇನೆ ಕಾರ್ಯಕರ್ತರು ತೆರವುಗೊಳಿಸಿದ್ದಲ್ಲದೆ ಕಲ್ಲಂಗಡಿ ಹಣ್ಣಿನ ವ್ಯಾಪಾರಿಯ ತಳ್ಳುಗಾಡಿಯನ್ನು ಧ್ವಂಸಗೊಳಿಸಿ ಅದರಲ್ಲಿದ್ದ ಕಲ್ಲಂಗಡಿಗಳನ್ನು ರಸ್ತೆಗೆ ಚೆಲ್ಲಿ ನಾಶಪಡಿಸಿದ್ದರು.

ಈ ಸಂಬಂಧ ರವಿವಾರ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಕಲ್ಲಂಗಡಿ ಹಣ್ಣಿನ ವ್ಯಾಪಾರಿ ನಬಿಸಾಬ್ ನೀಡಿದ ದೂರಿನ ಅನ್ವಯ ದುಷ್ಕರ್ಮಿಗಳ ವಿರುದ್ಧ ಪೊಲೀಸರು  ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. 

ಇದನ್ನೂ ಓದಿ... ಧಾರವಾಡ: ಮುಸ್ಲಿಂ ವರ್ತಕರ ತಳ್ಳುಗಾಡಿ ಧ್ವಂಸಗೊಳಿಸಿ ಹಣ್ಣುಗಳನ್ನು ನೆಲಕ್ಕೆಸೆದ ಶ್ರೀರಾಮಸೇನೆ ಕಾರ್ಯಕರ್ತರು

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News