ತುಮಕೂರಿನಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು, ಮಗುವಿಗೆ ಗಂಭೀರ ಗಾಯ
Update: 2022-04-10 15:58 IST
ತುಮಕೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ತುಮಕೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಗು ಗಂಭೀರ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.