×
Ad

ಐಎಂಎ ಹಗರಣ: ಅಪಾರ್ಟ್‍ಮೆಂಟ್ ಮಾರಾಟಕ್ಕೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಅರ್ಜಿ; ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್

Update: 2022-04-10 18:11 IST

ಬೆಂಗಳೂರು, ಎ. 10: ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿರುವ ತನ್ನ ಅಪಾರ್ಟ್‍ಮೆಂಟ್ ಮಾರಾಟಕ್ಕೆ ವಿಶೇಷ ಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಐಎಂಎ ಹಗರಣದ ಪ್ರಮುಖ ಆರೋಪಿ ಮೊಹಮ್ಮದ್ ಮನ್ಸೂರ್ ಖಾನ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸಂಬಂಧ ಹೈಕೋರ್ಟ್ ಸಕ್ಷಮ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 

ಈ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಬೆಂಗಳೂರಿನ ತಿಲಕ್ ನಗರದ ಬನ್ನೇರುಘಟ್ಟ ರಸ್ತೆ ಲೇ ಔಟ್‍ನಲ್ಲಿ ಮನ್ಸೂರ್ ಖಾನ್ 2014 ರಲ್ಲಿ ಅಪಾರ್ಟ್‍ಮೆಂಟ್ ಖರೀದಿಸಿದ್ದಾರೆ. ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತರಕ್ಷಣಾ ಕಾಯ್ದೆ (ಕೆಪಿಐಡಿಎಫ್ ಇ) 2004ರ ಅನುಸಾರ ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೆಪಿಐಡಿಎಫ್‍ಇ ಪ್ರಕರಣಗಳಿಗಾಗಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯ 2022ರ ಮಾರ್ಚ್ 7 ರಂದು ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News