×
Ad

ಗುಜರಾತ್: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, ಆರು ಕಾರ್ಮಿಕರು ಮೃತ್ಯು

Update: 2022-04-11 10:44 IST

ಅಹಮದಾಬಾದ್: ಗುಜರಾತ್‌ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ  ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹಮದಾಬಾದ್‌ನಿಂದ 235 ಕಿ.ಮೀ. ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಮೃತಪಟ್ಟಿರುವ ಆರು ಕಾರ್ಮಿಕರು ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದರು. ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ.

"ರಿಯಾಕ್ಟರ್ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಆರು ಮಂದಿ ಕಾರ್ಮಿಕರು  ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಬೇರೆ ಯಾರೂ ಗಾಯಗೊಂಡಿಲ್ಲ’’ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News