×
Ad

ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ತನಿಖೆ ನಡೆಸುವುದರಲ್ಲಿ ತಪ್ಪೇನಿಲ್ಲ: ಸಂಸದೆ ಸುಮಲತಾ ಅಂಬರೀಶ್

Update: 2022-04-11 11:49 IST
 ಸುಮಲತಾ ಅಂಬರೀಶ್

ಮಂಡ್ಯ: ಅಲ್‌ ಖೈದಾ ಮುಖಂಡ ಹೊಗಳಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ತನಿಖೆಗೆ ಬಿಜೆಪಿ ನಾಯಕರು ಆಗ್ರಹಿಸಿರುವ ವಿಚಾರದ ಕುರಿತು ಮಂಡ್ಯ ಸಂಸದೆ ಸುಮಲತಾ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ. 

ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ತನಿಖೆ ನಡೆಸುವುದರಲ್ಲಿ ತಪ್ಪೇನಿಲ್ಲ. ‘ಉಗ್ರ ಸಂಘಟನೆಯ ಮುಖ್ಯಸ್ಥ ವಿಡಿಯೋದಲ್ಲಿ ಹೇಳಿರುವುದು ನಿಜವೇ ಅಥವಾ ಸುಳ್ಳೇ ಎಂಬ ಬಗ್ಗೆ ತನಿಖೆಯಿಂದ ಗೊತ್ತಾಗುತ್ತದೆ. ಒಬ್ಬರು ವಿಡಿಯೋ ಅಸಲಿ ಎಂದರೆ ಇನ್ನೊಬ್ಬರು ಆ ವಿಡಿಯೋ ನಕಲಿ ಎನ್ನುತ್ತಾರೆ. ಹೀಗಾಗಿ ತನಿಖೆ ನಡೆದರೆ ನಿಖರ ಮಾಹಿತಿ ಬಯಲಿಗೆ ಬರುತ್ತದೆ ಎಂದು ಹೇಳಿದರು. 

ಇದನ್ನೂ ಓದಿ: ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ತನಿಖೆ ನಡೆಸುವಂತೆ ಸಿಎಂಗೆ ಪತ್ರ ಬರೆದ ಸಂಸದ ಅನಂತ ಕುಮಾರ್ ಹೆಗಡೆ

'ಸದ್ಯ ಮಂಡ್ಯದಲ್ಲಿ ಮತ್ತು ರಾಜ್ಯದಲ್ಲಿ ವಾತಾವರಣ ಶಾಂತಿಯುತವಾಗಿಯೇ ಇದೆ. ಯಾರೇ ಆದರೂ ರಾಜಕೀಯವಾಗಿ ಹೇಳಿಕೆ ನೀಡುವ ಮೂಲಕ ವಾತಾವರಣ ಕೆಡಿಸುವ ಕೆಲಸ ಮಾಡಬಾರದು' ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News