ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌

Update: 2022-04-11 07:38 GMT

ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಇಡಿ (ಜಾರಿ ನಿರ್ದೇಶನಾಲಯ) ಪ್ರಶ್ನಿಸುತ್ತಿದೆ ಎಂದು ತಿಳಿದು ಬಂದಿದೆ. ನ್ಯಾಶನಲ್‌ ಹೆರಾಲ್ಡ್‌ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಅವರಿಗೆ ಇಡಿ ಸಮನ್ಸ್‌ ಜಾರಿಗೊಳಿಸಿದೆ ಎಂದು timesofindia.com ವರದಿ ಮಾಡಿದೆ.

ಫೆಬ್ರವರಿಯಲ್ಲಿ ದಿಲ್ಲಿ ಹೈಕೋರ್ಟ್ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಮತ್ತು ಪ್ರಕರಣದ ಇತರ ಆರೋಪಿಗಳ ಪ್ರತಿಕ್ರಿಯೆಯನ್ನು ಕೇಳಿತ್ತು. ನ್ಯಾಯಮೂರ್ತಿ ಸುರೇಶ್ ಕೈಟ್ ನೋಟಿಸ್ ನೀಡುವ ವೇಳೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಯಂಗ್ ಇಂಡಿಯಾ (ವೈಐ)ಗೆ ಏಪ್ರಿಲ್ 12 ರೊಳಗೆ ಸುಬ್ರಮಣಿಯನ್ ಸ್ವಾಮಿಯ ಮನವಿಯ ಬಗ್ಗೆ ತಮ್ಮ ನಿಲುವನ್ನು ಕೋರಿದ್ದರು.

ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (ವೈಐಎಲ್) ಸ್ವಾಧೀನಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ನಾಯಕರು ವಂಚನೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2012 ರಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News