×
Ad

ರಸ್ತೆ ಅಪಘಾತ: ಸಂಸದ ಸಂಗಣ್ಣ ಕರಡಿ ಸಹೋದರ ಮೃತ್ಯು

Update: 2022-04-11 15:08 IST
 ಬಸವರಾಜ (ಬಸಣ್ಣ) ಕರಡಿ

ಕೊಪ್ಪಳ: ತಾಲೂಕಿನ ಟನಕನಕಲ್ ಸಮೀಪದಲ್ಲಿ ಸಂಭವಿಸಿದ ಅಪಘಾತದಲ್ಲಿ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸವರಾಜ (ಬಸಣ್ಣ) ಕರಡಿ ಮೃತಪಟ್ಟಿದ್ದಾರೆ. 

ಸೋಮವಾರ ಬಸವರಾಜ ಕರಡಿ ಅವರ ದ್ವಿಚಕ್ರ ವಾಹನಕ್ಕೆ ಟನಕನಕಲ್ ಬಳಿ ಕಾರೊಂದು ಢಿಕ್ಕಿಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ. 

ಗಾಯಗೊಂಡಿದ್ದ ಬಸವರಾಜ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. 

ಕೊಪ್ಪಳ ಗ್ರಾಮಾಂತ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News