ಬೆಂಗಳೂರು: ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Update: 2022-04-11 15:41 IST
ಬೆಂಗಳೂರು, ಎ.11: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪದೇ ಪದೇ ಪಟ್ರೋಲ್, ಡಿಸೇಲ್, ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ರಾಜ್ಯದಲ್ಲಿ ಜನರ ಗಮನವನ್ನು ಬೆಲೆಯೇರಿಕೆಯಂತ ಜ್ವಲಂತ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ , ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ,ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಎಐಸಿಸಿ ಪದಾಧಿಕಾರಿಗಳು, ಹಿರಿಯ ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.