×
Ad

ಸಾಲು ಸಾಲು ರಜೆ ಹಿನ್ನೆಲೆ ಕೆಎಸ್ಸಾರ್ಟಿಸಿಯಿಂದ 300 ಹೆಚ್ಚುವರಿ ಬಸ್ ವ್ಯವಸ್ಥೆ

Update: 2022-04-11 18:06 IST

ಬೆಂಗಳೂರು, ಎ.11: ಎ.14ರಿಂದ ಸಾರ್ವತ್ರಿಕ ಹಾಗೂ ವಾರಾಂತ್ಯದ ರಜೆಗಳ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 300 ಹೆಚ್ಚುವರಿ ಸಾರಿಗೆ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ನಿಗಮ ತಿಳಿಸಿದೆ.

ಎ.13 ರಂದು ಕರ್ನಾಟಕ ರಾಜ್ಯದಲ್ಲಿ ಬೆಂಗಳೂರಿನಿಂದ ಬೆಳಗಾವಿ, ಕುಂದಾಪುರ, ಧರ್ಮಸ್ಥಳ, ಗೋಕರ್ಣ, ಹೊರನಾಡು, ಮಂಗಳೂರು, ಮಡಿಕೇರಿ, ಶೃಂಗೇರಿ, ಉಡುಪಿ, ಕುಕ್ಕೆ ಸುಬ್ರಮಣ್ಯ ಮುಂತಾದ ಸ್ಥಳಗಳಿಗೆ ಹಾಗೂ ಬೆಂಗಳೂರಿನಿಂದ ಅಂತರರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದ ಮಧುರೈ, ಕೊಡೈಕೆನಾಲ್, ಊಟಿ, ತಂಜಾವೂರು, ಕೊಯಮತ್ತೂರ್, ವಿಜಯವಾಡ, ಹೈದ್ರಾಬಾದ್, ನೆಲ್ಲೂರು, ಶಿರಡಿ, ಪಣಜಿ, ಪಾಂಡಿಚೆರಿ ಮುಂತಾದ ಸ್ಥಳಗಳಿಗೆ 300 ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.  

ವಿಶು ಮತ್ತು ಈಸ್ಟರ್ ಹಬ್ಬದ ಪ್ರಯುಕ್ತ ಕೇರಳ ರಾಜ್ಯದ ಕಣ್ಣೂರು, ವಡಕರ, ತಿರುವನಂತಪುರಂ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಜಿಕೋಡ್, ಕಾಸರಗೋಡು, ಕೊಟ್ಟಾಯಂ ಮುಂತಾದ ಸ್ಥಳಗಳಿಗೆ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ರಾಜ್ಯದ/ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಎ. 17 ರಂದು ಹೆಚ್ಚುವರಿ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 

ಇ-ಟಿಕೇಟ್ ಬುಕಿಂಗ್‍ನ್ನು http://www.ksrtc.karnataka.gov.in ವೆಬ್ ಸೈಟ್ ಮುಖಾಂತರ ಹಾಗೂ ಕರ್ನಾಟಕ ಮತ್ತು ಅಂತರರಾಜ್ಯದಲ್ಲಿರುವ ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮುಖೇನ ಈ ಸಾರಿಗೆಗಳಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರು ಹೆಚ್ಚುವರಿ ವಿಶೇಷ ಸಾರಿಗೆಗಳ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News