ಖಾಸಗಿ ಕಂಪೆನಿಯ ಉದ್ಯೋಗಿ ಆತ್ಮಹತ್ಯೆ
Update: 2022-04-11 18:59 IST
ಕುಂದಾಪುರ : ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10ರಂದು ಸಂಜೆ ಕೋಣಿ ಗ್ರಾಮದ ಮೇಲ್ಕಟ್ಕೇರೆ ಎಂಬಲ್ಲಿ ನಡೆದಿದೆ.
ಮೃತರನ್ನು ಕೋಟೇಶ್ವರ ಮಾರ್ಕೋಡು ನಿವಾಸಿ ಸಂತೋಷ್ ಪೂಜಾರಿ ಎಂಬವರ ಮಗ ಸುಜಯ್ ಪೂಜಾರಿ (21) ಎಂದು ಗುರುತಿಸಲಾಗಿದೆ. ಇವರು ವರ್ಕ್‌ಫ್ರಮ್ ಹೋಮ್ ಕೆಲಸ ಮಾಡಿಕೊಂಡಿದ್ದು, ವೈಯಕ್ತಿಕ ಕಾರಣದಿಂದ ಮನನೊಂದು ಮೇಲ್ಕಟ್ಕೇರೆ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.