×
Ad

ಸುಸೂತ್ರವಾಗಿ ನಡೆದ ಎಸೆಸೆಲ್ಸಿ ಪರೀಕ್ಷೆ; ಮುಸ್ಲಿಂ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ಸ್ ಫೆಡರೇಶನ್ ಕೃತಜ್ಞತೆ

Update: 2022-04-11 19:43 IST

ಮಂಗಳೂರು : ಪ್ರಸಕ್ತ ಸಾಲಿನ ಎಸೆಸೆಲ್ಸಿ ಅಂತಿಮ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆದಿರುವ ಬಗ್ಗೆ ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ಸ್ ಫೆಡರೇಶನ್ (ಮೀಫ್) ಪ್ರಶಂಸೆ ವ್ಯಕ್ತಪಡಿಸಿದೆ.

ಈ ಬಗ್ಗೆ ಹೇಳಿಕೆಯೊಂದನ್ನು ನೀಡಿರುವ ʼಮೀಫ್ʼ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಆಯಾ ಶಾಲೆಗಳು ನಿಗದಿಪಡಿಸಿದ ಸಮವಸ್ತ್ರದಂತೆ ಪರೀಕ್ಷಾ ಕೇಂದ್ರಕ್ಕೆ ತೆರಳಿ ಸುಸೂತ್ರವಾಗಿ ಯಾವುದೇ ಅಡೆತಡೆ ಇಲ್ಲದೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ರಾಜ್ಯ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ದ.ಕ. ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಭಯ ಜಿಲ್ಲೆಗಳ ಡಿಡಿಪಿಐಗಳು ಹಾಗೂ ಎಲ್ಲಾ ವಲಯಗಳ ಬಿಇಒಗಳು, ಎಲ್ಲಾ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಮತ್ತು ಈ ಎಲ್ಲಾ ಪ್ರಕ್ರಿಯೆಗಳಲ್ಲಿ ಸೂಕ್ತ ಮಾರ್ಗದರ್ಶನ ನೀಡಿ ಸಹಕರಿಸಿದ ವಿಧಾನಸಭೆಯ ವಿಪಕ್ಷ ಉಪನಾಯಕ  ಯು.ಟಿ.ಖಾದರ್ ಹಾಗೂ ಪರೀಕ್ಷೆಯ ಯಶಸ್ವಿಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

ಎ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಯಾವುದೇ ಗೊಂದಲಕ್ಕೆ ಒಳಗಾಗದೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯತ್ತ ಗಮನ ಹರಿಸಬೇಕು. ಅಲ್ಲದೆ ಸರಕಾರ ಕೂಡ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News