×
Ad

ಬಲಿಪ ಪ್ರಸಾದ್ ಭಾಗವತ ನಿಧನ

Update: 2022-04-11 21:04 IST

ಮಂಗಳೂರು : ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳದ ಭಾಗವತರಾ ಗಿದ್ದ, ಯಕ್ಷಗಾನ ಲೋಕದ ಪ್ರಸಿದ್ಧ ಭಾಗವತ ಮನೆತನದ ಬಲಿಪ ನಾರಾಯಣ ಭಾಗವತ ಅವರ ಪುತ್ರ, ಬಲಿಪ ಪ್ರಸಾದ್ ಭಾಗವತ (46) ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಎರಡು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ತಿಂಗಳುಗಳ ಹಿಂದೆ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಚೇತರಿಗೆ ಕಂಡಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ಸಂಜೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಮೂವರು ಮಕ್ಕಳು ಹಾಗೂ ಅಪಾರ ಅಭಿಮಾನಿಗಳು, ಬಂಧು ,ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News