×
Ad

ಘನತ್ಯಾಜ್ಯ ವಿಲೇವಾರಿಗೆ ಸ್ಥಳ ಗುರುತು: ಸೂಕ್ತ ಕ್ರಮಕ್ಕೆ ಹೈಕೋರ್ಟ್ ಆದೇಶ

Update: 2022-04-11 21:15 IST
ಫೈಲ್ ಚಿತ್ರ

ಬೆಂಗಳೂರು, ಎ.11: ನದಿ ಸುತ್ತಮುತ್ತಲಿನ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿಗೆ ಸ್ಥಳ ಗುರುತಿಸಿರುವುದನ್ನು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಈ ಕುರಿತಂತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಆದೇಶಿಸಿದೆ.

ಮಂಡ್ಯದ ಅಂಬಿಗರ ಗ್ರಾಮದ ಜನರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಅರ್ಜಿದಾರರು ತಮ್ಮ ಗ್ರಾಮದಲ್ಲಿ ಘನತ್ಯಾಜ್ಯ ಘಟಕ ಆರಂಭಿಸಿದರೆ ನದಿ ಕಲುಷಿತವಾಗುವುದರ ಜತೆಗೆ ಸ್ಥಳೀಯ ಪರಿಸರ ಹಾಳಾಗಲಿದೆ ಎಂದಿದ್ದಾರೆ. ಹೀಗಾಗಿ, ಅರ್ಜಿದಾರರು ತಮ್ಮ ಸಮಸ್ಯೆ ಕುರಿತಂತೆ 10 ದಿನಗಳಲ್ಲಿ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಬೇಕು. ನಂತರದ 6 ವಾರಗಳಲ್ಲಿ ಜಿಲ್ಲಾಧಿಕಾರಿ ಸ್ಥಳೀಯರ ಕುಂದುಕೊರತೆ ಹಾಗೂ ಸ್ಥಳ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News