ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ: ಕೋಮುಗಲಭೆ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಜಿಪಿ ಸೂಚನೆ

Update: 2022-04-11 16:46 GMT
ಪ್ರವೀಣ್ ಸೂದ್

ಬೆಂಗಳೂರು, ಎ.11: ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸುವ, ಕಾನೂನುಬಾಹಿರ ಚಟುವಟಿಕೆ ಹಾಗೂ ಕೋಮುಗಲಭೆಗೆ ಕಾರಣವಾಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚಿಸಿದ್ದಾರೆ.

ಸೋಮವಾರ ಆಯಾ ಜಿಲ್ಲಾ ಕೇಂದ್ರ ಹಾಗೂ ವಲಯವಾರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಆನ್‍ಲೈನ್ ಸಭೆ ನಡೆಸಿರುವ ಅವರು, ರಾಜ್ಯದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ಸಾರ್ವಜನಿಕರನ್ನು ಕಾಪಾಡುವ ಜವಾಬ್ದಾರಿ ಪೊಲೀಸರ ಮೇಲಿದೆ. ಹೀಗಾಗಿ, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು ಎಂದೂ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News