ರಾಜ್ಯದ ಪ್ರಸಕ್ತ ಬೆಳವಣಿಗೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Update: 2022-04-11 22:01 IST
ಉಡುಪಿ : ರಾಜ್ಯದ ಧರ್ಮ ಸಂಘರ್ಷದಿಂದ ಕೈಗಾರಿಕೆಗಳಿಗೆ ಸಮಸ್ಯೆಯಾಗುತ್ತದೆ ಎಂಬುದು ಸುಳ್ಳು. ರಾಜ್ಯದ ಪ್ರಸಕ್ತ ಬೆಳವಣಿಗೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಣಿಪಾಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅತೀ ಹೆಚ್ಚು ಎಫ್ ಡಿ ಐ ಹೂಡಿಕೆ ನಮ್ಮ ರಾಜ್ಯಕ್ಕೆ ಬರುತ್ತಿದೆ. ಈ ಕ್ವಾರ್ಟರ್ ನಲ್ಲಿ 43 ಶೇ. ಹೂಡಿಕೆ ನಮ್ಮ ರಾಜ್ಯಕ್ಕೆ ಬಂದಿದೆ. ಪ್ರಪಂಚದ ಮೂಲೆಮೂಲೆಗಳಿಂದ ಹೂಡಿಕೆದಾರರು ಬರುತ್ತಿದ್ದಾರೆ. ಕೈಗಾರಿಕೆಗಳು ನಮ್ಮ ರಾಜ್ಯ ತೊರೆಯುವ ಪ್ರಶ್ನೆಯೇ ಇಲ್ಲ ಎಂದರು.
ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಯಥೇಚ್ಛವಾಗಿದೆ. ಮೂಲ ಸೌಕರ್ಯದ ಗುಣಮಟ್ಟ ಬಹಳ ಚೆನ್ನಾಗಿದೆ. ದೇಶದ ಟಾಪ್ ʼಆರ್ & ಡಿʼ ಸೆಂಟರ್ ನಮ್ಮಲ್ಲಿದೆ. ಕರ್ನಾಟಕದಲ್ಲಿ 180 ʼಆರ್ & ಡಿʼ ಸೆಂಟರ್ ಗಳಿವೆ. ಬೇರೆ ರಾಜ್ಯಗಳಿಗೆ ಡಿಮಾಂಡ್ ಇಲ್ಲ ಎಂದು ಸಿಎಂ ತಿಳಿಸಿದರು.