ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಹತ್ಯೆ: ಆರೋಪ
Update: 2022-04-11 22:15 IST
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರು ಘಟನೆ ನಗರದ ರಾಣೇಶಪೀರ ದರ್ಗಾದ ಎಸ್ಎಮ್ ಕೃಷ್ಣ ಕಾಲೋನಿಯಲ್ಲಿ ಸೋಮವಾರ ನಡೆದಿದೆ.
ಪಂಡಿತ್ ದಿನಾ ದಯಾಳ್ ಕಾಲೋನಿ ನಿವಾಸಿ ಪಾಪ್ಯಾ ಅಲಿಯಾಸ್ ಉಮಾಕಾಂತ್ (22) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ಎಸ್ಎಮ್ ಕೃಷ್ಣ ಕಾಲೋನಿ ಬಳಿ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಗೆ ಒಳಗಾಗಿ ಕೆಳಗೆ ಬಿದ್ದ ಉಮಾಕಾಂತ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಸಬ್ ಅರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.