ರಾಜ್ಯದಲ್ಲಿಂದು 48 ಮಂದಿಗೆ ಕೊರೋನ ದೃಢ, 86 ಜನರು ಗುಣಮುಖ

Update: 2022-04-12 18:28 GMT

ಬೆಂಗಳೂರು, ಎ.12: ರಾಜ್ಯದಲ್ಲಿ ಮಂಗಳವಾರ 48 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 86 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3946084ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,057ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,408ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಗದಗ ಜಿಲ್ಲೆಯಲ್ಲಿ ಕೋವಿಡ್‍ನಿಂದ ಒಬ್ಬರು ಮೃತಪಟ್ಟಿದ್ದಾರೆ.   

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 48 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 40, ಚಿಕ್ಕಮಗಳೂರು 1, ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 40 ಜನರಿಗೆ ಕೊರೋನ ದೃಢ

 ರಾಜಧಾನಿಯಲ್ಲಿ ಮಂಗಳವಾರದಂದು 40 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,63,855 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,82,146 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,962 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News