ನಿರ್ಮಲಾ ಎಲಿಗಾರಗೆ ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ

Update: 2022-04-12 18:33 GMT

ಬೆಂಗಳೂರು, ಎ.12: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಎ.6ರಂದು ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ 2022ನೆಯ ಸಾಲಿನ “ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ”ಗೆ ಲೇಖಕಿ ಡಾ. ನಿರ್ಮಲಾ ಸಿ. ಎಲಿಗಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪ್ರಶಸ್ತಿಯ ಮೊತ್ತ ರೂ. 10 ಸಾವಿರ ನಗದು. ಇದರ ಜೊತೆಗೆ ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನೂ ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News