ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹ
ಮಂಗಳೂರು : ಗುತ್ತಿಗೆಗಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ವಿವಿಧ ಪಕ್ಷ ಮತ್ತು ಸಂಘಟನೆಗಳು ಆಗ್ರಹಿಸಿದೆ.
*ಈಶ್ವರಪ್ಪರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬಂಧಿಸಬೇಕು ಮತ್ತು ಗುತ್ತಿಗೆದಾರರ ಕಮಿಷನ್ ವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಒತ್ತಾಯಿಸಿದ್ದಾರೆ.
*ಸಚಿವ ಈಶ್ವರಪ್ಪರನ್ನು ಮಂತ್ರಿಮಂಡಲದಿಂದ ವಜಾಮಾಡಬೇಕು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಒತ್ತಾಯಿಸಿದ್ದಾರೆ.
*ಸಚಿವ ಈಶ್ವರಪ್ಪರನ್ನು ಮಂತ್ರಿಮಂಡಲದಿಂದ ವಜಾ ಮಾಡಬೇಕು ಎಂದು ಎಐವೈಫ್ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷ ಜಗತ್ಪಾಲ್ ಬಿ.ಕೆ. ಮತ್ತು ಪುಷ್ಪರಾಜ್ ಬಿ. ಆಗ್ರಹಿದ್ದಾರೆ.
*ಸಚಿವ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಂತೋಷ್ ಪಾಟಿಲ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಎಐಟಿಯುಸಿ ದ.ಕ.ಮತ್ತು ಉಡುಪಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಸೀತಾರಾಮ ಬೇರಿಂಜ ಆಗ್ರಹಿಸಿದ್ದಾರೆ.