×
Ad

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ ಡಿಜಿಗೆ ದೂರು

Update: 2022-04-13 19:06 IST
ಕೆ.ಎಸ್. ಈಶ್ವರಪ್ಪ

ಬೆಂಗಳೂರು, ಎ.13: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ಸಲ್ಲಿಕೆ ಮಾಡಿದರು.

ಬುಧವಾರ ಇಲ್ಲಿನ ನೃಪತುಂಗ ರಸ್ತೆಯ ಡಿಜಿಪಿ ಕಚೇರಿಗೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗ, ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಅವರು ನೇರವಾಗಿ ಕಾರಣರಾಗಿದ್ದಾರೆ. ಹಾಗಾಗಿ, ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ದೂರು ನೀಡಿದ ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್.ಮನೋಹರ್, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ನೇರ ಕಾರಣ. ಸಂತೋಷ್ ಸಾವಿಗೂ ಮುನ್ನ ಡೆತ್‍ನೋಟ್ ಕಳಿಸಿದ್ದು, ಅದರಲ್ಲಿ ಸಚಿವರೇ ನನ್ನ ಸಾವಿಗೆ ಕಾರಣ ಎಂದು ನಮೂದಿಸಲಾಗಿದೆ. ಹೀಗಾಗಿ ಸಚಿವರು ಪ್ರಕರಣದಲ್ಲಿ ನೇರ ಆರೋಪಿಯಾಗಿದ್ದು, ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News