ಬಿಸಿಲಿನ ಝಳಕ್ಕೆ ತತ್ತರಿಸಿದ್ದ ಬೆಂಗಳೂರಿಗೆ ತಂಪೆರೆದ ಮಳೆ

Update: 2022-04-13 14:10 GMT

ಬೆಂಗಳೂರು, ಎ.13: ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಬುಧವಾರ ಬೆಂಗಳೂರಿನ ಹಲವೆಡೆ ಭಾರಿ ಮಳೆ (Rain) ಸುರಿಯಿತು. 

ಮಧ್ಯಾಹ್ನ 4 ಗಂಟೆ ಸುಮಾರಿಗೆ ಮಳೆ ಪ್ರಾರಂಭವಾಯಿತು. ಇದರಿಂದ, ಕೆಲವು ರಸ್ತೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.

ಆರ್.ಆರ್.ನಗರ, ಅಂಜನಾಪುರ, ಕೆ.ಆರ್.ವೃತ್ತ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ಮಲ್ಲೇಶ್ವರಂ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.

ಮಳೆ ಸುರಿದ ಪರಿಣಾಮ ಮಲ್ಲೇಶ್ವರಂ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೆಸ್ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ.ಆರ್.ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು ಕಂಡು ಬಂತು. ಟೆಂಡರ್ ಶೂರ್ ಕಾಮಗಾರಿಗಳು ಮತ್ತು ಪಾಲಿಕೆಯ ವಿವಿಧ ಅಭಿವೃದ್ಧಿ ಕೆಲಸದ ಸ್ಥಳಗಳಲ್ಲಿ ನೀರು ನಿಂತಿತ್ತು. ಇದರಿಂದ ಟ್ರಾಫಿಕ್ ಸಮಸ್ಯೆ ಉದ್ಭವಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News