×
Ad

ಬೆಂಗಳೂರು | ನಿವೃತ್ತ ಸೇನಾ ಸಿಬ್ಬಂದಿಯ ಕೊಲೆ: ಆರೋಪ

Update: 2022-04-13 19:55 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.13: ಭಾರತೀಯ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದ ಸುರೇಶ್ ಎಂಬುವರನ್ನು ದುಷ್ಕರ್ಮಿಗಳು ಕೊಲೆಗೈದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ದೊಮ್ಮಲೂರಿನ ಗೌತಮ್ ನಗರದಲ್ಲಿ ಸುರೇಶ್ ವಾಸವಾಗಿದ್ದರು. ಬುಧವಾರ ಮಧ್ಯಾಹ್ನ ಮನೆಯಲ್ಲಿರುವಾಗ ಆರೋಪಿಗಳು ಮನೆ ಹಿಂಬಾಗಿಲಿನಿಂದ ನುಗ್ಗಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಮಣ್ಯೇಶ್ವರರಾವ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News