ಉಡುಪಿ: ಕೆಓಎಸ್ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ
Update: 2022-04-13 20:25 IST
ಉಡುಪಿ : ಕರ್ನಾಟಕ ಮುಕ್ತ ಶಾಲೆ -ಕೆಓಎಸ್-ಪರೀಕ್ಷೆಗಳು ಎ.೧೮ ರಿಂದ ೨೭ರವರೆಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಇಲ್ಲಿನ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ, ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ೧೪೪(೧)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.