ನಾಗಪುರವಾರ್ಡ್: ಶಾಸಕರ ಭವನದಲ್ಲಿ ಅಂಬೇಡ್ಕರ್ ದಿನಾಚರಣೆ

Update: 2022-04-14 06:10 GMT

ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಾಗಪುರ ವಾರ್ಡ್ ನಲ್ಲಿರುವ ಶಾಸಕರ ಭವನದಲ್ಲಿ ಇಂದು ಭಾರತ ರತ್ನ ಸಂವಿಧಾನ ಶಿಲ್ಪಿ  ಬಿ ಆರ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ರವರು ಪಾಲ್ಗೊಂಡು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕಾರ್ಯಕ್ರಮದಲ್ಲಿ ಮಹಿಳಾ ಪತ್ರಕರ್ತರನ್ನು ಹಾಗೂ ಸ್ಥಳೀಯ ಹಿರಿಯ ಮುಖಂಡರನ್ನು ಇದೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ, ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷರಾದ ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ಎಸ್ ಹರೀಶ್ ಮುಖಂಡರಾದ ಎನ್ ಜಯರಾಂ, ಮಾಜಿ ಬಿಬಿಎಂಪಿ ಸದಸ್ಯರಾದ ಕೆವಿ ರಾಜೇಂದ್ರ ಕುಮಾರ್, ಎಂ  ಮಹದೇವ್ ಕಾರ್ಯಕ್ರಮ ಉಸ್ತುವಾರಿ ಹಾಗೂ ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಮಂಡಲ ಎಸ್ ಸಿ ಮೋರ್ಚಾ ಅಧ್ಯಕ್ಷರಾದ  ನಾರಾಯಣ ಸ್ವಾಮಿ, ನಿಸರ್ಗ ಜಗದೀಶ್, ಮಹಿಳಾ ಉಸ್ತುವಾರಿ ಮೈತ್ರಿ ನಾಗರತ್ನ, ಲೋಕೇಶ್ ಪದ್ಮಾವತಿ, ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News