ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

Update: 2022-04-14 08:13 GMT

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ  ಕಾಂಗ್ರೆಸ್ ನಾಯಕರು ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ.  

 ಈ ವೇಳೆ ಸಿಎಂ ನಿವಾಸದ ಬಳಿ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನ ಕೆಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. 

ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅಲ್ಲಿಂದ ತೆರಳಿದ ಕಾಂಗ್ರೆಸ್ ನಾಯಕರು ಸಿಎಂ ನಿವಾಸದ ಬಳಿ ಮುತ್ತಿಗೆಗೆ ಯತ್ನಿಸಿದ್ದಾರೆ. 

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಂ.ಬಿ ಪಾಟೀಲ್, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News