ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದ ಎದುರು ಕಾಂಗ್ರೆಸ್​ ಅಹೋರಾತ್ರಿ ಧರಣಿ

Update: 2022-04-14 09:55 GMT

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಪಾಟೀಲ್ ಆತ್ಕಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿಧಾನಸೌಧದ ಎದುರು ಕಾಂಗ್ರೆಸ್ ಅಹೋರಾತ್ರಿ   ಧರಣಿ ನಡೆಸುತ್ತಿದೆ. 

ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. 

ಇದೀಗ ವಿಧಾನಸೌಧದ ಎದುರು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು , ಸಚಿವ ಕೆ.ಎಸ್‌. ಈಶ್ವರಪ್ಪ ಅವರ ವಿರುದ್ಧ ಘೋಷಣೆ ಕೂಗಿದರು. 

ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಂ.ಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಶಾಸಕ ಪ್ರಿಯಾಂಕ್ ಖರ್ಗೆ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಹಲವು ನಾಯಕರು ಧರಣಿಯಲ್ಲಿ ಭಾಗವಹಿಸಿದ್ದಾರೆ. 

ಇದನ್ನೂ ಓದಿ... ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News