×
Ad

ಭಾರತ ದೇಶ ಸಮೃದ್ಧಿಯಾಗಲು ಅಂಬೇಡ್ಕರ್ ಅವರ ಸಂವಿಧಾನ ಕಾರಣ: ಮಿಥುನ್ ರೈ

Update: 2022-04-14 16:16 IST

ಹಳೆಯಂಗಡಿ: ದೂರದೃಷ್ಟಿಯುಳ್ಳ ಚಿಂತನೆಯೊಂದಿಗೆ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ಸಮೃದ್ಧ ಭಾರತ ದೇಶಕ್ಕೆ ಕಾರಣ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಚುನಾವಣೆ ಉಸ್ತುವಾರಿ ಯಾದ ಮಿಥುನ್ ರೈ ನುಡಿದರು.

ಮುಲ್ಕಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಹಳೆಯಂಗಡಿ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್  ಅಧ್ಯಕ್ಷ ಮೋಹನ್ ಕೋಟ್ಯಾನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕೋ-ಆರ್ಡಿನೇಟರ್ ಎಚ್ ವಸಂತ ಬರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ,  ಜಿಲ್ಲಾ ಕಾಂಗ್ರೆಸ್ ಸಮಿತಿಯ ಹರಿಯಪ್ಪ ಸಾಲಿಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸರ್ಫರಾಝ್ ಬಾಳ,  ಕಿರಣ್ ಶೆಟ್ಟಿ , ಹಳೆಯಂಗಡಿ ಗ್ರಾಮ‌ ಪಂಚಾಯತ್ ಸದಸ್ಯರಾದ ಅಬ್ದುಲ್ ಖಾದರ್, ಅಬ್ದುಲ್ ಅಝೀಝ್, ಹಮೀದ್ ಸಾಗ್, ಧರ್ಮಾನಂದ ಶೆಟ್ಟಿಗಾರ್, ಅದ್ದು ಅಂಗರಗುಡ್ಡೆ ಮೊದಲಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News