ರಾಜ್ಯದಲ್ಲಿ ಇನ್ನೂ ಒಂದೆರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2022-04-14 12:16 GMT

ಬೆಂಗಳೂರು, ಎ.14: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ಮಹಾರಾಷ್ಟ್ರದಿಂದ ಕರ್ನಾಟಕ ದಕ್ಷಿಣ ಒಳನಾಡಿನವರೆಗೆ ಮೋಡ ಕವಿದ ವಾತಾವರಣ ಇರುವ ಕಾರಣ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ಒಂದೆರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು, ಬೆಂ.ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಎ.15, 16ರಂದು ಗುಡುಗು-ಮಿಂಚುಸಹಿತ ಮಳೆಯಾಗಲಿದೆ. 

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ವಾಡಿಕೆಯಷ್ಟೇ ಸುರಿಯಲಿದೆ. ಆದರೆ, ಉತ್ತರ ಒಳನಾಡಿನಲ್ಲಿ ಜುಲೈ ಮತ್ತು ಆಗಸ್ಟ್‍ನಲ್ಲಿ ಮಳೆ ಕೊರತೆಯಾಗಲಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ವಾಡಿಕೆಯಷ್ಟೇ ಮಳೆ ಬೀಳಲಿದೆ. ಮುಂದಿನ ಒಂದು ವಾರದಲ್ಲಿ ಭಾರತೀಯ ಹವಾಮಾನ ಇಲಾಖೆ ಮುಂಗಾರು ಮಳೆ ಬಗ್ಗೆ ವರದಿ ನೀಡಲಿದೆ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News