ಈಶ್ವರಪ್ಪ ರಾಜೀನಾಮೆ ನೀಡುವುದು ಅನುಮಾನ, ಅವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸಲಿ: ಡಿ.ಕೆ ಶಿವಕುಮಾರ್ ಒತ್ತಾಯ

Update: 2022-04-14 13:55 GMT

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕೆ.ಎಸ್ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, 'ಈಶ್ವರಪ್ಪ ಅವರು ರಾಜೀನಾಮೆ ನೀಡುವುದು ಅನುಮಾನ, ಅವರನ್ನು ಕೇಸ್ ದಾಖಲಿಸಿ ಬಂಧಿಸಲಿ' ಎಂದು ಒತ್ತಾಯಿಸಿದರು. 

'ಈಶ್ವರಪ್ಪ ಅವರು ಎಂದೂ ನುಡಿದಂತೆ ನಡೆದವರಲ್ಲ, ನಾಳೆ ಸಂಜೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಗೆ ಅನುಮಾನವಿದೆ, ಅವರನ್ನು ಭ್ರಷ್ಟಾಚಾರದಡಿ ದೂರು ದಾಖಲಿಸಿ ಬಂಧಿಸಬೇಕು' ಎಂದು ಡಿ.ಕೆ ಶಿವಕುಮಾರ್ ಒತ್ತಾಯಿಸಿದರು. 

ಇದನ್ನೂ ಓದಿ..ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News