×
Ad

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಆಲಿಯಾ ಅಸ್ಸಾದಿ ಟ್ವೀಟ್

Update: 2022-04-14 20:43 IST

ಉಡುಪಿ : ಈ ತಿಂಗಳ 22ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಿಜಾಬ್ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಹಿಜಾಬ್‌ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಎ.೧೩ರಂದು ಟ್ವೀಟ್ ಮಾಡಿರುವ ಅಲಿಯಾ ಅಸಾದಿ, ‘ದ್ವಿತೀಯ ಪಿಯು ಪರೀಕ್ಷೆಗಳು ಎ.೨೨ರಿಂದ ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಮ್ಮ ಭವಿಷ್ಯ ಹಾಳಾಗದಂತೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನಮಗೆ ಅವಕಾಶ ನೀಡುವ ಬಗ್ಗೆ ನೀವು ನಿರ್ಧಾರ ತೆಗೆದುಕೊಳ್ಳಬೇಕು. ದಯವಿಟ್ಟು ಇದನ್ನು ಪರಿಗಣಿಸಿ. ನಾವು ಈ ದೇಶದ ಭವಿಷ್ಯ ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News