ವಿದ್ಯುತ್ ತಂತಿ ತುಳಿದು ಯುವಕ ಸ್ಥಳದಲ್ಲೇ ಮೃತ್ಯು
Update: 2022-04-14 21:22 IST
ಮಂಡ್ಯ, ಎ.14: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕು ಸಾಕ್ಷಿಬೀಡು ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ರೈತ ನಾಗಣ್ಣ ಅವರ ಪುತ್ರ ಮಹದೇವ್(23) ದುರ್ಘಟನೆಯಲ್ಲಿ ಸಾವಿಗೀಡಾಗಿದ್ದು, ಸೆಸ್ಕ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ನಾಗಣ್ಣ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗಿದೆ.