×
Ad

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹಿಂದೆ ಕಾಂಗ್ರೆಸ್: ನಳಿನ್ ಕುಮಾರ್ ಕಟೀಲು ಆರೋಪ

Update: 2022-04-15 11:23 IST

ಮಂಗಳೂರು, ಎ.15: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಲ್ಲೂ ಡೆತ್ ನೋಟ್ ಸಿಕ್ಕಿಲ್ಲ. ಕೇವಲ ವಾಟ್ಸ್ ಆ್ಯಪ್ ನಲ್ಲಷ್ಟೇ ಮೆಸೇಜ್ ಹರಿದಾಡಿದೆ. ಸಂತೋಷ್ ಸಾವಿನ ಹಿಂದೆ ಕಾಂಗ್ರೆಸ್ ಇದೆ. ತನಿಖೆ ನಡೆಯುತ್ತಿದೆ. ಸತ್ಯಾಸತ್ಯತೆ ಬಯಲಾಗುತ್ತದೆ ಎಂದು ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾಕೆ ಕಾಂಗ್ರೆಸ್ ಸರಕಾರ ಇದ್ದಾಗ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವರಾಗಿದ್ದ ಕೆ.ಜೆ.ಜಾರ್ಜ್ ರನ್ನು ಬಂಧಿಸಿಲ್ಲ? ಸಿದ್ದರಾಮಯ್ಯ ಸರಕಾರ ಇದ್ದಾಗ 24 ಮಂದಿ ಕಾರ್ಯಕರ್ತರ ಹತ್ಯೆಯಾಗಿತ್ತು. ಆ ವೇಳೆ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸಬೇಕಾಗಿತ್ತು. ಹಗರಣವೊಂದರಲ್ಲಿ ಜಾಮೀನು ಪಡೆದಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಕೂಡಾ ಜೈಲಿನಲ್ಲಿ ಇರಬೇಕಾಗಿತ್ತು.   ಅಲ್ಲದೇ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಹತ್ತು ಕೇಸ್ ಗಳಿದ್ದು ಅವರನ್ನು ಜೈಲಿಗೆ ಹಾಕಬೇಕು. ಆದ್ದರಿಂದ ಕಾಂಗ್ರೆಸ್ ನವರು ಜೈಲಿನ  ಹೊರಗೆ ಅಲ್ಲ, ಒಳಗಡೆ ಹೋರಾಟ ಮಾಡಬೇಕು ಅಂತ ವ್ಯಂಗ್ಯವಾಡಿದರು.

 ಕಾಂಗ್ರೆಸ್ ನವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ನಳಿನ್ ಕಿಡಿಕಾರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News