ಸುರತ್ಕಲ್: ಬಂಟರ ಸಂಘದಲ್ಲಿ ಯಕ್ಷಸಿರಿ ಉದ್ಘಾಟನೆ
ಸುರತ್ಕಲ್ : ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ ಯಕ್ಷಸಿರಿ ಯಕ್ಷಗಾನ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದದಲ್ಲಿ ಜರುಗಿತು.
ಪಂಚ ಯಕ್ಷಗಾನ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು ಯಕ್ಷಗಾನ ತರಬೇತಿ ಕೇಂದ್ರಗಳು ಅನೇಕ ಕಡೆಗಳಲ್ಲಿ ಪ್ರಾರಂಭಗೊಳ್ಳುತ್ತವೆ. ಆದರೆ ದಿನಕಳೆದಂತೆ ತರಬೇತಿ ಪಡೆಯುವವರ ಸಂಖ್ಯೆ ಕಡಿಮೆಯಾಗುತ್ತದೆ. ಆದರೆ ಸುರತ್ಕಲ್ ಬಂಟರ ಸಂಘ ಇತರರಿಗೆ ಸ್ಫೂರ್ತಿಯಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಯಕ್ಷಗಾನ ಅಕಾಡಮಿಯ ಸದಸ್ಯ ನವನೀತ್ ಶೆಟ್ಟಿ ಕದ್ರಿ ಭಾಗವಹಿಸಿದ್ದರು.
ಇತ್ತೀಚಿಗೆ ನಿಧನರಾದ ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ ಬಲಿಪರನ್ನು ಕಟ್ಲ ಲೀಲಾಧರ ಶೆಟ್ಟಿ ಸ್ಮರಿಸಿ ಸಂತಾಪ ಸೂಚಿಸಿದರು. ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಉಲ್ಲಾಸ್ ಆರ್. ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಅತಿಥಿಗಳಾಗಿ ಅಗರಿ ಸಂಸ್ಮರಣಾ ವೇದಿಕೆಯ ಅಧ್ಯಕ್ಷ ಅಗರಿ ರಾಘವೇಂದ್ರ ರಾವ್ ಸುರತ್ಕಲ್, ಯಕ್ಷಗಾನ ಅಕಾಡಮಿಯ ಸದಸ್ಯ ಮಾಧವ ಭಂಡಾರಿ ಕುಳಾಯಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಿಇ., ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕೇಂದ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ, ಯಕ್ಷಗುರು ರಾಕೇಶ್ ರೈ ಅಡ್ಕ ಭಾಗವಹಿಸಿದ್ದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸಂಘಟನಾ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಹರೀಶ್ ಶೆಟ್ಟಿ ಕಾಟಿಪಳ್ಳ, ಮಹಿಳಾ ಘಟಕದ ಅಧ್ಯಕ್ಷೆ ಚಿತ್ರಾ ಜೆ. ಶೆಟ್ಟಿ, ಯಕ್ಷಸಿರಿ ಸಹ ಸಂಚಾಲಕಿ ಕೇಸರಿ ಎಸ್. ಪೂಂಜಾ, ಯಕ್ಷಗುರು ರಾಕೇಶ್ ರೈ ಅಡ್ಕ ಉಪಸ್ಥಿತರಿದ್ದರು.
ಯಕ್ಷಸಿರಿ ಸುರತ್ಕಲ್ ಬಂಟರ ಸಂಘದ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಸ್ವಾಗತಿಸಿದರು. ಭಾಗವತ ಕೇಶವ ಶೆಟ್ಟಿ ಪಡ್ರೆ ಪ್ರಾರ್ಥಿಸಿದರು. ಲೋಕಯ್ಯ ಶೆಟ್ಟಿ ಮುಂಚೂರು ವಂದಿಸಿದರು. ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.