ಮಾಜಿ ಸಚಿವ ಈಶ್ವರಪ್ಪರನ್ನು ಭೇಟಿಯಾದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗ
Update: 2022-04-16 12:06 IST
ಶಿವಮೊಗ್ಗ, ಎ.16: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರವರ ಶಿವಮೊಗ್ಗ ನಿವಾಸಕ್ಕೆ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗವು ಶನಿವಾರ ಬೆಳಗ್ಗೆ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿತು.
ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ (ರಿ) ಚಿತ್ರದುರ್ಗ, ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಕನಕಗುರುಪೀಠ, ಡಾ.ಶ್ರೀ ಶಾಂತವೀರ ಮಹಾಸ್ವಾಮೀಜಿ, ಶ್ರೀ ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಭೋವಿಗುರುಪೀಠ ಚಿತ್ರದುರ್ಗ, ಶ್ರೀ ಮಾದರಚನ್ನಯ್ಯ ಮಹಾಸ್ವಾಮೀಜಿ ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗ, ಶ್ರೀ ಪುರುಷೋತ್ತಮನಾಂದಪುರಿ ಮಹಾಸ್ವಾಮೀಜಿ ಭಗೀರಥ ಪೀಠ, ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಜಿ ಕನಕಗುರುಪೀಠ ಹೊಸದುರ್ಗ, ಶ್ರೀ ರೇಣುಕಾನಂದ ಮಹಾಸ್ವಾಮೀಜಿ ನಾರಾಯಣ ಗುರುಪೀಠ ಶಿವಮೊಗ್ಗ ಹಾಗೂ ಶ್ರೀ ಬಸವಮಾಚಿದೇವ ಮಹಾಸ್ವಾಮಿಜಿ ಮಡಿವಾಳ ಗುರುಪೀಠ ಚಿತ್ರದುರ್ಗ ಇವರುಗಳು ನಿಯೋಗದಲ್ಲಿದ್ದರು.