ಗುಜರಾತ್: 108 ಅಡಿ ಎತ್ತರದ ಹನುಮಾನ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ
Update: 2022-04-16 12:56 IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹನುಮಾನ್ ಜಯಂತಿಯ ಸಂದರ್ಭದಲ್ಲಿ ಗುಜರಾತ್‌ನ ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಅನಾವರಣಗೊಳಿಸಿದರು.
ಹನುಮಾನ್ ಜಿ ಚಾರ್ ಧಾಮ್ ಯೋಜನೆಯ ಭಾಗವಾಗಿ ದೇಶದ 4 ಭಾಗಗಳಲ್ಲಿ ಸ್ಥಾಪಿಸಲಾದ ನಾಲ್ಕು ಪ್ರತಿಮೆಗಳ ಪೈಕಿ ಈ ಪ್ರತಿಮೆ ಎರಡನೆಯದು.
ಟ್ವಿಟರ್‌ನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ ಪ್ರಧಾನಿ, "ಇಂದು ನಾವು ಹನುಮಾನ್ ಜಯಂತಿಯ ವಿಶೇಷ ಸಂದರ್ಭದಲ್ಲಿ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ, ಹನುಮಾನ್ ಜಿ ಅವರ 108 ಅಡಿ ಪ್ರತಿಮೆಯನ್ನು ಉದ್ಘಾಟಿಸಿದೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದು ಒಂದು ಗೌರವವಾಗಿದೆ ಎಂದು ಹೇಳಿದ್ದಾರೆ.