ಚಿಕ್ಕಮಗಳೂರು | ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ, ಬೆಲೆಯೇರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Update: 2022-04-16 13:12 IST
ಚಿಕ್ಕಮಗಳೂರು, ಎ.16: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ತಾಲ್ಲೂಕು ಕಚೇರಿಯಿಂದ ಆಝಾದ್ ಪಾರ್ಕ್ ವೃತ್ತದ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಕೆ.ಎಸ್.ಈಶ್ವರಪ್ಪರನ್ನು ಬಂಧಿಸುವಂತೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧ ಭಾಗದಿಂದ ಕಾರ್ಯಕರ್ತರು ಆಗಮಿಸಿದ್ದರು.