×
Ad

ಕೊಲ್ಲೂರು: ಜೆಡಿಎಸ್‌ನಿಂದ ಜನತಾ ಜಲಧಾರೆ ರಥಯಾತ್ರೆಗೆ ಚಾಲನೆ

Update: 2022-04-16 19:58 IST

ಕುಂದಾಪುರ : ರಾಜ್ಯದ ಸಮಗ್ರ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗೆ ಆದ್ಯತೆ ನೀಡುವ ಬಹುಕಾಲ ದಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆಗೆ ಶನಿವಾರ ಉಡುಪಿ ಜಿಲ್ಲಾ ಜೆಡಿಎಸ್ ವತಿ ಯಿಂದ ಕೊಲ್ಲೂರಿನಲ್ಲಿ ಚಾಲನೆ ನೀಡಲಾಯಿತು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿ ಕೊಲ್ಲೂರಿನ ಸೌಪರ್ಣಿಕಾ ನದಿ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಯಾತ್ರೆ ಪ್ರಾರಂಭಗೊಂಡಿತು.  ಕಲಶ ಪೂಜೆ, ಪಕ್ಷದ ಕಾರ್ಯಕರ್ತೆಯರಿಂದ ಕಲಶ ಮೆರವಣಿಗೆ ಇತ್ಯಾದಿಗಳ ನಡುವೆ ಪುಣ್ಯಜಲವನ್ನು ಸಂಗ್ರಹ ಮಾಡಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸಮಾಜ ಸೇವಕ ಲೀಲಾಧರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ಅಡಿಗ ಕೊಲ್ಲೂರು, ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಮಂಗಳೂರು ಜೆಡಿಎಸ್ ಪ್ರಮುಖ ರಕ್ಷಿತ್ ಸುವರ್ಣ, ಮುಖಂಡರಾದ ಜಯಕುಮಾರ್ ಪರ್ಕಳ, ಜಾಕೆ ಮಾದವ ಗೌಡ, ಬೈಂದೂರು ಅಧ್ಯಕ್ಷ ಸಂದೇಶ್ ಭಟ್, ಕುಂದಾಪುರ ಬ್ಲಾಕ್ ಅಧ್ಯಕ್ಷ ಕಿಶೋರ್ ಕುಮಾರ್, ಕಾರ್ಕಳ ಬ್ಲಾಕ್ ಅಧ್ಯಕ್ಷ ಶ್ರೀಕಾಂತ ಪೂಜಾರಿ, ಉಡುಪಿ ಬ್ಲಾಕ್ ಅಧ್ಯಕ್ಷ ಬಾಲಕೃಷ್ಣ, ರತ್ನಾಕರ ಪೂಜಾರಿ, ವೆಂಕಟೇಶ, ನಿತಿನ್ ಶೆಟ್ಟಿ, ಶಾಲಿನಿ ಶೆಟ್ಟಿ, ಹುಸೆನ್ ಹೈಕಾಡಿ, ಜಯಶೀಲ್ ಶೆಟ್ಟಿ, ಮನ್ಸೂರ್ ಇಬ್ರಾಹಿಂ, ದಕ್ಷತ್ ಶೆಟ್ಟಿ, ಸುಮತಿ ಹೆಗಡೆ ಮಂಗಳೂರು, ರಮೇಶ್ ಕುಂದಾಪುರ, ಪೂರ್ಣಿಮಾ ನಾಯ್ಕ್ ಮೊದಲಾವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News