ದಿಲ್ಲಿ: ಹನುಮ ಜಯಂತಿ ಮೆರವಣಿಗೆಯ ವೇಳೆ ಘರ್ಷಣೆ; 14 ಮಂದಿಯ ಬಂಧನ,ತನಿಖೆಗೆ 10 ತಂಡಗಳ ರಚನೆ

Update: 2022-04-17 05:23 GMT
Photo:AFP

ಹೊಸದಿಲ್ಲಿ:  ದಿಲ್ಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ  ರಾತ್ರಿ ಹನುಮ ಜಯಂತಿ ಮೆರವಣಿಗೆಯ ವೇಳೆ ಎರಡು ಸಮುದಾಯಗಳ ಸದಸ್ಯರ ನಡುವೆ ನಡೆದ  ಘರ್ಷಣೆಗೆ ಸಂಬಂಧಿಸಿ 14 ಮಂದಿಯನ್ನು ಬಂಧಿಸಲಾಗಿದ್ದು, ಘಟನೆಯ ತನಿಖೆಗೆ 10 ತಂಡಗಳನ್ನು ರಚಿಸಲಾಗಿದೆ ಎಂದು NDTV ವರದಿ ಮಾಡಿದೆ.

ಕಲ್ಲು ತೂರಾಟ ಹಾಗೂ  ನಂತರದ ಘರ್ಷಣೆಯಲ್ಲಿ ಎಂಟು ಪೊಲೀಸ್ ಸಿಬ್ಬಂದಿ ಹಾಗೂ  ಒಬ್ಬ ನಾಗರಿಕ ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಲು ತೂರಾಟ ಹಾಗೂ  ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 14 ಜನರನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ  ಸಾಮಾಜಿಕ ಜಾಲತಾಣಗಳಲ್ಲಿನ ವೀಡಿಯೋಗಳನ್ನು ಬಳಸಿಕೊಂಡು ಹೆಚ್ಚಿನ ಶಂಕಿತರನ್ನು ಗುರುತಿಸಲಾಗಿದೆ. ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರು ಗಲಭೆ, ಕೊಲೆ ಯತ್ನ ಹಾಗೂ  ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಕ್ರೈಂ ಬ್ರಾಂಚ್ ಹಾಗೂ  ವಿಶೇಷ ದಳದ ಅಧಿಕಾರಿಗಳನ್ನು ಒಳಗೊಂಡ ಹತ್ತು ತಂಡಗಳನ್ನು ರಚಿಸಲಾಗಿದೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News