ಮಂಗಳೂರು: ಅಪಘಾತದಲ್ಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಮೃತ್ಯು; ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ
Update: 2022-04-17 10:53 IST
ಮಂಗಳೂರು : ರಸ್ತೆ ದಾಟುವ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಗ್ನಿಶಾಮಕ ಇಲಾಖೆ ಮಂಗಳೂರಿನಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂಟಿಕಾನ ಬಳಿ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಗಂಗಾಧರ ಬಿ ಕಮ್ಮಾರ (36) ಎಂದು ಗುರುತಿಸಲಾಗಿದ್ದು, ಅವರು ಮಂಗಳೂರಿನ ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ತನ್ನ ಪತಿ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿದ ಪತ್ನಿ ಶೃತಿ (30) ತನ್ನ 6 ತಿಂಗಳ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಅಪಘಾತ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ.