×
Ad

ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಅಧಿಕಾರ ಸ್ವೀಕಾರ

Update: 2022-04-17 12:41 IST

ಬೆಂಗಳೂರು : ಇತ್ತೀಚೆಗಷ್ಟೇ ವಿಧಾನ ಪರಿಷತ್ ಸದಸ್ಯತ್ವ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹೀಮ್  ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಜೆಡಿಎಸ್ ನ ನಿಕಟ ಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ಜೆಡಿಎಸ್ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಸಂಕಲ್ಪ ಮಾಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News