×
Ad

ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

Update: 2022-04-17 13:30 IST

ಬಳ್ಳಾರಿ: ವಿಜಯನಗರದಲ್ಲಿ ಆರಂಭವಾಗಿರುವ  ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಬಳ್ಳಾರಿ ಜಿಲ್ಲೆಯ ತೋರಣಗಲ್ಲ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಚಿವರಾದ ಡಾ. ಅಶ್ವತ್ಥ ನಾರಾಯಣ್, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಬಿ ಶ್ರೀರಾಮುಲು, ಕೇಂದ್ರ ಸಚಿವ ಭಗವಂತ ಖೂಬಾ, ಸಂಸದರಾದ ತೇಜಸ್ವಿ ಸೂರ್ಯ, ದೇವೇಂದ್ರಪ್ಪ, ಶಾಸಕರಾದ ಸೋಮಶೇಖರ್ ರೆಡ್ಡಿ, ಸತೀಶ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಮತ್ತು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News