×
Ad

ಹುಬ್ಬಳ್ಳಿ ಹಿಂಸಾಚಾರ; ಕಠಿಣ ಕ್ರಮಕ್ಕೆ ನಳಿನ್‍ ಕುಮಾರ್ ಕಟೀಲ್ ಮನವಿ

Update: 2022-04-17 13:44 IST

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹಿಂಸಾಚಾರಕ್ಕೆ ಇಳಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಕ್ಷ ಅಪೇಕ್ಷಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಖಂಡನೀಯ. ಆದರೆ, ಅದನ್ನೇ ನೆಪವನ್ನಾಗಿ ಮಾಡಿಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಿರುವುದು ಮತ್ತು ಪೊಲೀಸ್ ಠಾಣೆಗಳ ಮೇಲೆ ದಾಳಿ ಯತ್ನ ನಡೆಸಿದ್ದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಇದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕೈಗೆ ತೆಗೆದುಕೊಳ್ಳುವ ಸಮಾಜವಿರೋಧಿ ಶಕ್ತಿಗಳನ್ನು ಸಮರ್ಥ ರೀತಿಯಲ್ಲಿ ಹತ್ತಿಕ್ಕುವ ಕೆಲಸವನ್ನು ಸರಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಕಾನೂನು ಕೈಗೆತ್ತಿಕೊಳ್ಳುವ ಸಮಾಜದ್ರೋಹಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವುದಾಗಿ ಅವರು ತಿಳಿಸಿದ್ದಾರೆ. ಸಿಸಿ ಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಹಲವಾರು ಆರೋಪಿಗಳನ್ನು ಬಂಧಿಸಿದ ಪೊಲೀಸರ ಕ್ರಮಕ್ಕೆ ಅವರು ಮೆಚ್ಚುಗೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News