×
Ad

ಮಹಿಳೆಯರು-ಮಕ್ಕಳಿಗೆ ಪೌಷ್ಠಿಕ ಆಹಾರ ಪೂರೈಕೆ: ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆ

Update: 2022-04-17 16:51 IST

ಬೆಂಗಳೂರು, ಎ. 17: ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆ(ಐಸಿಡಿಎಸ್) ಅಡಿ ಮಕ್ಕಳು, ಗರ್ಭಿಣಿಯರು ಮತ್ತು ಎದೆ ಹಾಲುಣಿಸುವ ತಾಯಂದಿರಿಗೆ ಪೌಷ್ಠಿಕಾಂಶಯುಕ್ತ ಮತ್ತು ಗುಣಮಟ್ಟದ ಆಹಾರ ಪೂರೈಸುವುದನ್ನು ಖಾತರಿಪಡಿಸಲು ಪೂರಕ ಪೌಷ್ಠಿಕಾಂಶ ತಯಾರಿ ಮಹಿಳಾ ತರಬೇತಿ ಕೇಂದ್ರಗಳನ್ನು (ಎಂಎಸ್ಪಿಟಿಸಿ) ರಚಿಸಿದ್ದ ಆದೇಶವನ್ನು ಹಿಂಪಡೆದ ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸರಕಾರದ ಆದೇಶ ಪ್ರಶ್ನಿಸಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಂಗೀತಾ ಗದುಗಿನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ಮಾಡಿದೆ.

ಅಲ್ಲದೆ, ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಠಿಕಾಂಶಯುಕ್ತ ಆಹಾರ ಪೂರೈಸುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ಹುಡುಕುವ ಸಂಬಂಧ ತಾಂತ್ರಿಕ ಸಮಿತಿ ನೀಡಿರುವ ವರದಿಯನ್ನು ಒಪ್ಪಿಕೊಳ್ಳುವ ಕುರಿತಂತೆ ಸರಕಾರ ತನ್ನ ನಿರ್ಧಾರ ತಿಳಿಸಬೇಕು ಎಂದು ನಿರ್ದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News