ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ‌ ಆರೋಪ: ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮನೆಗೆ ಸಿಐಡಿ ದಾಳಿ

Update: 2022-04-17 15:34 GMT
 ದಿವ್ಯಾ ಹಾಗರಗಿ

ಕಲಬುರಗಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಭಾರಿ ಅಕ್ರಮ‌ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ  ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ನಾಯಕಿ ದಿವ್ಯಾ ಹಾಗರಗಿ ಮನೆ ದಾಳಿ ಮಾಡಲು ಮುಂದಾಗಿದ್ದಾರೆ.

ಡಿವೈಎಸ್​ಪಿ ಶಂಕರಗೌಡ ನೇತೃತ್ವದ ಸಿಐಡಿ ತಂಡ  ರವಿವಾರ ಕಲಬುರಗಿಯ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯಾ ಹಾಗರಗಿ ಮನೆಗೆ ತಪಾಸಣೆಗೆ ಆಗಮಿಸಿದೆ. ಹಾಗರಗಿಗೆ ಸೇರಿದ್ದ ಜ್ಞಾನಜ್ಯೋತಿ ಇಂಗ್ಲಿಷ್​ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ ಮೂವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದೆ ಎಂದು ತಿಳಿದು ಬಂದಿದೆ. 

ಕಳೆದ ಮೂರ್ನಾಲ್ಕು ದಿನಗಳಿಂದ  ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ತಂಡ ದಿವ್ಯಾ ಅವರ ಪತಿ ರಾಜೇಶ್ ಅವರನ್ನು ವಿಚಾರಣೆ ನಡೆಸುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News